ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರಶಸ್ತಿ

0

ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ .

ಆ 14ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷರಾದ ದರ್ಮಪಾಲ ರಾವ್ ಕಜೆ ಹಾಗೂ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಸತತವಾಗಿ ಪ್ರತಿಷ್ಠಿತ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಶಸ್ತಿ ಪುರಸ್ಕಾರ ಪಡೆದುಕೊಂಡಿರುವ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023 -24 ನೇ ಸಾಲಿನಲ್ಲಿ6280 ಸದಸ್ಯರನ್ನು ಹೊಂದಿದ್ದು ಒಟ್ಟು 992 ಕೋಟಿ ವ್ಯವಹಾರ ನಡೆಸಿ 203.80 ಲಕ್ಷ ಲಾಭ ಗಳಿಸಿದ್ದು 98.56 ಸಾಲ ವಸೂಲಾತಿ.ಅಡಿಟ್ ವರ್ಗೀಕರಣದಲ್ಲಿ ಎ ಗ್ರೇಡ್ ಪಡೆದಿರುತ್ತದೆ.ಈ ಸಾಧನೆಯನ್ನು ಎಸ್.ಸಿ.ಡಿ.ಸಿ.ಸಿ ಗುರುತಿಸಿ ಆಲಂಕಾರು ಪ್ರಾ.ಕೃ.ಪ.ಸ,ಸಂಘವು ಸನ್ಮಾನಕ್ಕೆ ಭಾಜನವಾಗಿದೆ. ಪ್ರಶಸ್ತಿ ಸ್ವೀಕಾರ ಸಂದರ್ಭದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ ಜಯರಾಮ ರೈ ಬಳಜ್ಜ, ಮನ್ಮಥ ಎಸ್. ಎನ್, ಕುಶಾಲಪ್ಪ ಗೌಡ ಪೂವಾಜೆ, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್, ಸೇರಿದಂತೆ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಿ.ಪಿ ಶೇಷಪತಿ ರೈ, ಆಶಾ ತಿಮ್ಮಪ್ಪ ಗೌಡ,ರಾಮಚಂದ್ರ ನಾಯ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here