ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಲಲಿತಾ ಸಹಸ್ರನಾಮ ಪಠಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ವತ್ಸಲಾ ರಾಜ್ಞಿ ವಹಿಸಿಕೊಂಡು, ವರಮಹಾಲಕ್ಷ್ಮೀ ವೃತವನ್ನಾಚರಿಸುವುದರ ಪ್ರಾಮುಖ್ಯತೆಯ ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳು ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ ಜೆ ಶೆಟ್ಟಿ ಪಾಲ್ಗೊಂಡು, “ಧಾರ್ಮಿಕ ಆಚರಣೆಗಳನ್ನು ಆಚರಿಸುವ ಹಿಂದೆ ಸಾಕಷ್ಟು ಅರ್ಥಪೂರ್ಣ ವಿಚಾರಗಳಿರುತ್ತದೆ. ನಮ್ಮ ದೈನಂದಿನ ಕಾರ್ಯಗಳಿಗೆ ನೈತಿಕ ಬಲವನ್ನು ತುಂಬಿ ನಮ್ಮ ಶ್ರೇಯೋಭಿವೃದ್ಧಿಗೆ ಇಂತಹ ಆಚರಣೆಗಳು ಪೋಷಣೆಯನ್ನು ನೀಡುತ್ತದೆ.” ವರಮಹಾಲಕ್ಷ್ಮೀ ವೃತಾಚರಣೆಯ ಶುಭದಿನವು ಸರ್ವರಿಗೂ ಸನ್ಮಂಗಳ ಉಂಟಾಗಲೆಂದು ಶುಭಹಾರೈಸಿದರು. ವೇದಿಕೆಯಲ್ಲಿ ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ಶಂಕರಿ ಶರ್ಮ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು, ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಲಲಿತಾ ಸಹಸ್ರನಾಮವನ್ನು ಪಠಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪನ್ಯಾಸಕಿ ಸವಿತಾ ಎಸ್.ಎಸ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.