ಮಾಣಿ: ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಮತ್ತು ಹಾಸನದಿಂದ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ಬರುತ್ತಿದ್ದ ಕ್ಯಾಂಟರ್ ವಾಹನದ ನಡುವೆ ಪೆರ್ನೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವೃತೆಗೆ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.