ಆರೆಲ್ತಡಿ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

0

ಆರೆಲ್ತಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಸುರತ್ಕಲ್ ಮಂಗಳೂರು ಇವರ ವತಿಯಿಂದ ಗ್ರಾಮ ಪಂಚಾಯತ್ ಸವಣೂರು, ಹಿರಿಯ ವಿದ್ಯಾರ್ಥಿ ಸಂಘ ಆರೆಲ್ತಡಿ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆರೆಲ್ತಡಿ ಇದರ ಸಹಯೋಗದಲ್ಲಿ ಇತ್ತೀಚೆಗೆ ಕಂಪ್ಯೂಟರೀಕೃತ ಉಚಿತ ಕಣ್ಣಿನ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸವಣೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಸುಂದರಿ ಬಿ. ಎಸ್.ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಪಟ್ಟೆ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜೀವಿ ಶೆಟ್ಟಿ ಕೆಡೆಂಜಿ, ತೀರ್ಥರಾಮ ಕೆಡೆಂಜಿ, ಚಂದ್ರಾವತಿ ಸುಣ್ಣಾಜೆ, ಮಾಜಿ ಗ್ರಾಮ.ಪಂ.ಸದಸ್ಯರಾದ ಸತೀಶ್ ಬಲ್ಯಾಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಕುದ್ಮನಮಜಲು, ವೈದ್ಯಾಧಿಕಾರಿಗಳಾದ ರಾಮಚಂದ್ರ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು, ಪೋಷಕರು, ಊರವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಚಂದ್ರಹಾಸ್ ಸುರತ್ಕಲ್ ಇವರು ಕಾರ್ಯಕ್ರಮವನ್ನು ಸಂಘಟಿಸಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹ ಶಿಕ್ಷಕರಾದ ಶ್ರೀಕಾಂತ್ ಕಂಬಳಕೋಡಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಗುರು ಜಗನ್ನಾಥ ಎಸ್ ಎಲ್ಲರನ್ನೂ ಸ್ವಾಗತಿಸಿ, ಗೌರವ ಶಿಕ್ಷಕಿ ರಮ್ಯಾ ರೈ ವಂದಿಸಿದರು. ಅಕ್ಷರದಾಸೋಹ ಸಿಬ್ಬಂದಿ ಜ್ಯೋತಿ ಪಟ್ಟೆ, ಸುನೀತಾ ಮಡಕೆ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here