ವಿಟ್ಲ: ಅಳಕೆಮಜಲು ಹಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಆಟಿಡೊಂಜಿ ಕೂಟ ಕಾರ್‍ಯಕ್ರಮವನ್ನು ನಡೆಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ತಿರುಮಲೇಶ್ವರ ನಾಯ್ಕರವರು ಧ್ವಜಾರೋಹಣ ನಡೆಸಿದರು. ಈ ಸಂದರ್ಭದಲ್ಲಿ ಎಸ್,ಡಿ.ಎಂ.ಸಿಯ ಉಪಾಧ್ಯಕ್ಷರಾದ ರೂಪಕಿಶೋರ್ ಪುಂಡಿಕಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಟಿಯ ಮಹತ್ವದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಮೇಶ್ ಎಂ. ಬಾಯಾರ್‌ರವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಸುಮಾರು 8 ವರ್ಷಗಳ ಕಾಲ ಸೇವೆಗೈದ ಶಿಕ್ಷಕಿ ಜಯಂತಿ ರವರನ್ನು ಸನ್ಮಾನಿಸಲಾಯಿತು. ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಜನಾರ್ಧನ ಆಚಾರ್ಯರವರು ಶಾಲೆಗೆ ಡಯಾಸ್ ಸ್ಟಾಂಡ್ ಅನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಪಲ್ಯ, ಉದ್ಯಮಿಗಳಾದ ಪ್ರವೀಣ್‌ಕುಮಾರ್ ಶೆಟ್ಟಿ, ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಭ ಭಜನಾ ಮಂದಿರದ ಅಧ್ಯಕ್ಷರಾದ ಜಗದೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಇಸ್ಮಾಲಿ.ಕೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರಾದ ರಾಜೀವಿ ಹಾಗೂ ಶೋಭಾ ವಂದಿಸಿ, ಶಿಕ್ಷಕಿ ಅನುರಾಧರವರು ಕಾರ್‍ಯಕ್ರಮ ನಿರೂಪಿಸಿದರು, ಶಿಕ್ಷಕಿಯಾರಾದ ಜ್ಯೋತಿ, ಬಲ್ಕೀಸ್ ಹಾಗೂ ದಿವ್ಯಾರವರು ಸಹಕರಿಸಿದರು. ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ನಡೆಯಿತು.