ಪಟ್ಟೆ ವಿದ್ಯಾ ಸಂಸ್ಥೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ಬಡಗನ್ನೂರು: ಪಟ್ಟೆ ವಿದ್ಯಾ ಸಂಸ್ಥೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ನಾರಾಯಣ ಭಟ್  ಬಿರ್ನೋಡಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ವೇಣುಗೋಪಾಲ್ ಪಿ ವಹಿಸಿ, ಸ್ವಾತಂತ್ರೋತ್ಸವದ ಶುಭ ಸಂದೇಶವನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ನೀಲಗಿರಿ ಉಪಸ್ಥಿತರಿದ್ದರು. ಸ್ವಾತಂತ್ರೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಪ್ರಾಥಮಿಕ ಶಾಲಾ ಬಹುಮಾನದ ಪಟ್ಟಿಯನ್ನು ರಾಮಚಂದ್ರಪ್ಪ, ಪ್ರೌಢಶಾಲೆ ವಿಭಾಗದ ಬಹುಮಾನ ಪಟ್ಟಿಯನ್ನು ಸಹ ಶಿಕ್ಷಕಿ ಪ್ರೀತಿ ಕುಮಾರಿ ವಾಚಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ರಾಜಗೋಪಾಲ್ ರವರು ಸ್ವಾಗತಿಸಿ ಪ್ರೌಢಶಾಲಾ ಮುಖ್ಯ ಗುರು ಸುಮನ  ವಂದಿಸಿದರು ಪ್ರೌಢಶಾಲಾ ಸಹ ಶಿಕ್ಷಕ ವಿಶ್ವನಾಥ ಬಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here