ಚಂದಳಿಕೆ ಹಿ.ಪ್ರಾ ಶಾಲೆಯಲ್ಲಿ ಆಟಿಡೊಂಜಿ ಕೂಟ

0

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು‌.
ಚಂದಳಿಗೆ ವಿದ್ಯಾವರ್ಧಕ ಸಂಘದ ಪಧಾಧಿಕಾರಿ ಭವಾನಿ ರೈ ಪಿಂಗಾರಾ ಅರಳಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ಆಟಿಡೊಂಜಿ ದಿನದ ಮಹತ್ವದ ಬಗ್ಗೆ ತಿಳಿಸಿದರು, ಪಟ್ಟಣ ಪಂಚಾಯತ್ ನ ಸದಸ್ಯರಾದ ರಕ್ಷಿತಾ ಸನತ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಮತಿ ದೇಜಪ್ಪ, ಚಂದಳಿಕೆ ವಿದ್ಯಾವರ್ಧಕ ಸಂಘದ ಸದಸ್ಯರಾದ ಸಂಜೀವ ಪೂಜಾರಿ ವಿಟ್ಲ, ತೆರೇಸಾ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ವಿಶ್ವನಾಥ ಗೌಡ ಕುಳಾಲು ಸ್ವಾಗತಿಸಿದರು ಮಕ್ಕಳಿಂದ ಭಾಷಣ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಹ ಶಿಕ್ಷಕರಾದ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವೆಂಕಟೇಶ ವಂದಿಸಿದರು.

LEAVE A REPLY

Please enter your comment!
Please enter your name here