ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ – ನವರಾತ್ರಿ ಆಮಂತ್ರಣ ಪತ್ರ ಬಿಡುಗಡೆ

0

ವಿಟ್ಲ: ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಿತು.

ಇದೇ ಸಂದರ್ಭದಲ್ಲಿ ಶ್ರೀಗಳು ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿಸರು. ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಳಿಕೆ , ಪುರೋಹಿತರಾದ ಗಣೇಶ್ ಭಟ್ , ಈಶ್ವರ ಭಟ್ ಕಣಿಯೂರು , ವಿಶ್ವನಾಥ ಪೂಜಾರಿ ನರ್ಕಳ, ಮಾತೃ ಮಂಡಳಿ ಅಧ್ಯಕ್ಷೆ ಸುಜಾತ ಉಪಸ್ಥಿತರಿದ್ದರು. ಟ್ರಸ್ಟ್ ನ ಕಾರ್ಯದರ್ಶಿ ಚಂದ್ರಶೇಖರ ಕಣಿಯೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here