ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಅಬ್ದುಲ್ ಅಜೀಜ್ ರವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪ್ರಗತಿ ಕಾಣಬೇಕಾದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನವನ್ನು ಮೂಡಿಸಬೇಕು ಎಂದು ಕರೆ ನೀಡುತ್ತಾ, ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೋರಿದರು. ಬಳಿಕ ವಿದ್ಯಾರ್ಥಿಗಳ ಮೆರವಣಿಗೆಯನ್ನು ನಡೆಸಿ ಬಳಿಕ ಸಭಾ ಕಾರ್ಯಕ್ರಮವನ್ನು ನಡೆಯಿತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಸೈನಿಕರಾದ ಭಾಸ್ಕರ ಗೌಡ ಕನಕಮಜಲು ಇವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ಅಬ್ದುಲ್ ಅಜೀಜ್ ವಹಿಸಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಹೀರಾ ಅಬ್ದುಲ್ ಖಾದರ್, ಖಜಾಂಚಿ ಬಶೀರ್ ಕೌಡಿಚ್ಚರ್,ಸುರೇಶ್ ಆಳ್ವ,ಪ್ರದೀಪ್ ರೈ ಮೇನಾಲ,ಯಶ್ವಿತ್ ಕಾಳಮ್ಮನೆ, ಖಾದರ್ ಕರ್ನೂರು, ಬದ್ರುದ್ದಿನ್,ಪ್ರಮೀಳ ಎಂ ಎನ್, ಕೃಷ್ಣಪ್ರಸಾದ್, ಶಾಲಾ ನಾಯಕ ಹರ್ಷಲ್ ಎಂ ರವರು ಉಪಸ್ಥಿತರಿದ್ದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮವನ್ನು ನಿರೂಪಿಸಿದರು.ಶಿಕ್ಷಕ ಚಂದ್ರಮೋಹನ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು.