ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಉಪ್ಪಿನಂಗಡಿ ಇದರ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆ.19ರಂದು ನಡೆಯಲಿದೆ.
ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಲಲಿತಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 10:30ಕ್ಕೆ ಗ್ರಾ.ಪಂ. ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಚರ್ಚಾ ನಿಯಂತ್ರಣಾಧಿಕಾರಿಯಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಭಾಗವಹಿಸಲಿದ್ದಾರೆ ಎಂದು ಗ್ರಾ.ಪಂ.ನ ಪ್ರಕಟಣೆ ತಿಳಿಸಿದೆ.