ಹಿಂದುಳಿದ ವರ್ಗಗಳ ಇಲಾಖೆಯಿಂದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ,ವಿದ್ಯಾಸಿರಿ ಊಟ, ವಸತಿ ಸಹಾಯ ಯೋಜನೆಗೆ ಅರ್ಜಿ ಆಹ್ವಾನ-ಸೆ.15 ಅರ್ಜಿ ಸಲ್ಲಿಕೆಗೆ ಅಂತಿಮ ದಿನ

0

ಪುತ್ತೂರು: 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ, ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆ.15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ಪುತ್ತೂರು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here