ನೆಲ್ಯಾಡಿ: ಇಲ್ಲಿನ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧರಾದ ಲೆಫ್ಟಿನೆಂಟ್ ಕರ್ನಲ್ ಮಥಾಯಿ ಹಾಗೂ ನಿವೃತ್ತ ಯೋಧರಾದ ಸೆಬಾಸ್ಕಿನ್ ಕೆ.ಕೆ.ಆಗಮಿಸಿದರು. ಮಥಾಯಿ ಅವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಸೆಬಾಸ್ಟಿನ್ ಕೆ.ಕೆ.ಅವರು ಯೋಧರ ಸೇವೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಡಿಸಿಕೊಳ್ಳಬೇಕು, ಶಿಸ್ತು ಒಬ್ಬ ಉತ್ತಮ ನಾಗರೀಕನನ್ನಾಗಿ ಮಾಡಲು ಸಹಕಾರಿಯಾಗಿದೆ ಎಂದು ಹೇಳಿದರು.
ಸಂಸ್ಥೆಯ ಮುಖ್ಯಸ್ಥರಾದ ಜಾರ್ಜ್ ಕೆ ಥಾಮಸ್ ಸ್ವಾಗತಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಲ್ ರವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಸ್ವಾತಂತ್ರ್ಯ ದಿನಾಚರಣೆಗಳು ಶಾಲೆಯಲ್ಲಿ ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಇಲ್ಲಿ ನಡೆಯುವ ಕಾರ್ಯಕ್ರಮಗಳು ಮಾದರಿಯಾಗಬೇಕು ಎಂದು ಹೇಳಿ ಶುಭ ಹಾರೈಸಿದರು. ಧನ್ವಿ ಹಾಗೂ ಅನ್ಸಲಿನಾ ನಿರೂಪಿಸಿದರು. ಶಾಲಾ ನಾಯಕಿ ಏಂಜಲ್ ವಂದಿಸಿದರು. ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಜೋಸೆ ಎಂ.ಜೆ., ಫಾ.ಜೇಮ್ಸ್, ಐಟಿಐ ಪ್ರಾಂಶುಪಾಲರಾದ ಸಜಿ ಕೆ.ತೊಮಸ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಜಾರ್ಜ್ ಕೆ ತಾಮಸ್ ಉಪಸ್ಥಿತರಿದ್ದರು.