ಪಡುಮಲೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಪ್ರಥಮ ವರ್ಷದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ

0

ಬಡಗನ್ನೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಇದರ ವತಿಯಿಂದ ಪ್ರಥಮ ವರ್ಷದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮವು ಅ.18ರಂದು ಪೂರ್ವಾಹ್ನ ಗಂ.9ರಿಂದ  ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಡಾ.ರಮಾ.ಕೆ.ಟಿ ಭಂಡಾರಿ ವೇದಿಕೆಯಲ್ಲಿ ನಡೆಯಿತು. 

ಶ್ರೀ ದೇವಾಲಯದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಕ್ಷೇತ್ರದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಗದ್ದೆಗೆ ಹಾಲು ಭಾಗಿನ ಅರ್ಪಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ನಿಟ್ಟೆಗುತ್ತು ಪೇರಾಲು ಬಲರಾಜ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ  ಮಕ್ಕಳಿಗೆ ಧಾರ್ಮಿಕ  ಶಿಕ್ಷಣ ನೀಡುವ ಅಗತ್ಯವಿದೆ. ಸಮಾಜದಲ್ಲಿ ಮೊಬೈಲ್ ಫೋನ್‌ಗಳು ಮಕ್ಕಳನ್ನು ಕ್ಷಣ ಮಾತ್ರದಲ್ಲಿ ದಾರಿ ತಪ್ಪಿಸುವ ಕೆಲಸ ಅಗುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ರಾಮಾಯಣ, ಮಹಾಭಾರತ ಇತ್ಯಾದಿ ಧಾರ್ಮಿಕ ವಿಚಾರದ ಬಗ್ಗೆ ಪೋಷಕರು ಕಥೆ ಹೇಳುವ ಮುಖಾಂತರ ಮನಸ್ಸು ಕೆಂದ್ರೀಕರಿಸಬೇಕಾದ ಅನಿವಾರ್ಯತೆ ಇದೆ. ಜಾತಿ,ಭೇದ,ಮತ, ಮರೆತು ನಾವೆಲ್ಲರೂ ಭಾರತಾಂಭೆಯ ಮಕ್ಕಳು ಎಂಬ ಭಾವನೆಯಲ್ಲಿ ಧರ್ಮ ರಕ್ಷಣೆ ಮಾಡೋಣ, ಧರ್ಮದ ಅಚಾರ, ವಿಚಾರ ಮತ್ತು ಸಂಸ್ಕೃತಿ ಬಗ್ಗೆ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ಅಗತ್ಯತೆ ಇದೆ ಎಂದ ಅವರು ಛಿದ್ರಗೊಳ್ಳುತ್ತಿರುವ ಹಿಂದೂ ಸಮಾಜವನ್ನು ಸಂಘಟನೆ ಮಾಡುವ ಮೂಲಕ ರಕ್ಷಣೆ ಮಾಡುವ ಕೆಲಸ ಪಡುಮಲೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಾಡುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಪಡುಮಲೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್  ತೆಂಗಿನ ಹಿಂಗಾರ ಹರಳಿಸುವ  ಮೂಲಕ  ಸಂಪ್ರದಾಯಿಕವಾಗಿ ಉದ್ಘಾಟಿಸಿ ಶುಭ ಹಾರೈಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ಭಟ್ ಬಿರ್ನೋಡಿ, ಕ್ರೀಡಾ ಅನಾವರಣಗೊಳಿಸುವ ಮೂಲಕ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮವು ಪಡುಮಲೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಪದಡ್ಕ ಅಧ್ಯಕ್ಷತೆ ನಡೆಯಿತು. ಮುಖ್ಯ ಅತಿಥಿಗಳಾಗಿ, ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಡಾ.ರವೀಶ್ ಪಡುಮಲೆ, ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಸತೀಶ್ ರೈ ಕಟ್ಟಾವು, ನಿಡ್ಪಳ್ಳಿ ಶಾಂತದುರ್ಗಾ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ನಾಗೇಶ್ ಗೌಡ ಪುಳಿತ್ತಡಿ ಸಂದರ್ಭೋಚಿತ ಮಾತನಾಡಿ ಶುಭ ಹಾರೈಸಿದರು.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಗಂಗಾಧರ ರೈ ಮೇಗಿನಮನೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು, ಉಪಾಧ್ಯಕ್ಷ ಗಂಗಾಧರ ರೈ ಮೇಗಿನಮನೆ, ಉದ್ಯಮಿ ಸುಧಾಕರ ಶೆಟ್ಟಿ ಮಂಗಳಾದೇವಿ, ಶ್ರೀಧರ ಭಟ್ ಚಂದುಕೂಡ್ಲು, ಶಂಕರಿ ಪಟ್ಟೆ, ಕೃಷ್ಣಪ್ರಸಾದ್, ಚಂದ್ರಶೇಖರ ಭಂಡಾರಿ ನಲಿಕೆಮಜಲು ಕಂಬಳ, ಲಿಂಗಪ್ಪ ಪೂಜಾರಿ ಮೈಯಾಳ, ರಾಮದಾಸ್ ಪೂಜಾರಿ ತಲೆಬೈಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ 

ದೇವಸ್ಥಾನದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಕ್ಕೆ ಸ್ಥಳಾವಕಾಶ ಒದಗಿಸಿಕೊಟ್ಟು ಕಾರ್ಯಕ್ರಮ ಯಶಸ್ಸಿಗೆ ಕಾರಣಕರ್ತರಾದ ನಿಟ್ಟೆಗುತ್ತು ಪೇರಾಲು ಬಲರಾಜ್ ಶೆಟ್ಟಿ ಅವರನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು ಶಾಲು ಹೊದಿಸಿ, ಫೇಟ ಧರಿಸಿ, ಫಲಪುಷ್ಪ ಸ್ಮರಣೆ ನೀಡಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here