





ವಿಟ್ಲ: ಆಟೋ ಚಾಲಕನೋರ್ವನಿಗೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್‌ನಲ್ಲಿ ನಡೆದಿದೆ.


ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ.





ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಪೀ ಎಂಬವನು ಚೂರಿ ಇರಿದ ವ್ಯಕ್ತಿ ಎಂದು ಮಾಹಿತಿ ಲಭಿಸಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.








