ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮೀ ಪೂಜೆ

0

ನೆಲ್ಯಾಡಿ: ಶ್ರೀರಾಮ ಶಿಶುಮಂದಿರ, ಚಾಮುಂಡೇಶ್ವರಿ ಭಜನಾ ಮಂಡಳಿ ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.16ರಂದು ನೆಲ್ಯಾಡಿ ಶ್ರೀರಾಮ ಶಾಲೆಯಲ್ಲಿ ಜರುಗಿತು.

ಬೆಳಿಗ್ಗೆ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗ ಮುಖ್ಯಸ್ಥರಾದ ವಿಜಯ ಸರಸ್ವತಿಯವರು ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು ಶುಭಹಾರೈಸಿದರು. ಸುಪ್ರೀತಾ ರವಿಚಂದ್ರ ಹೊಸವಕ್ಲು ಅಧ್ಯಕ್ಷತೆ ವಹಿಸಿದ್ದರು. ಶ್ರೀರಾಮ ವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಹಾಗೂ ನೆಲ್ಯಾಡಿ ಶ್ರೀರಾಮ ಶಿಶುಮಂದಿರದ ಅಧ್ಯಕ್ಷೆ ಪುಷ್ಪಲತಾ ಉಪಸ್ಥಿತರಿದ್ದರು. ಸುಪ್ರೀತಾ ರವಿಚಂದ್ರ ಸ್ವಾಗತಿಸಿ, ಪ್ರೀತಾ ವಂದಿಸಿದರು. ಭಾಗೀರಥಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here