ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಆ.19ರಂದು ಗ್ರಾಪಂ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ, ಪ್ರಭಾರ ಅಭಿವೃದ್ಧಿ ಅಧಿಕಾರಿ ಮನ್ಮಥ ಉಪಸ್ಥಿತರಿದ್ದರು. ನರೇಗಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸೌಮ್ಯ ಅಣ್ಣಪ್ಪ ನಾಯ್ಕರವರು ನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಸಹಕರಿಸಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರುಗಳು, ನರೇಗಾ ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಜಯಂತಿ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಜಾನಕಿ, ಗುಲಾಬಿ, ಕೇಶವ,ಲೋಕನಾಥ ಸಹಕರಿಸಿದ್ದರು.
ಒಳಮೊಗ್ರು ಗ್ರಾಪಂನಿಂದ ನರೇಗಾದಲ್ಲಿ ಒಟ್ಟು 5927 ಮಾನವ ದಿನಗಳ ಕೆಲಸ ಆಗಿದ್ದು ರೂ.18,72,431 ಕೂಲಿ ವೆಚ್ಚ ಹಾಗೂ ರೂ.9,48,613 ಸಾಮಾಗ್ರಿ ವೆಚ್ಚ ಪಾವತಿಸಲಾಗಿದೆ. ಒಟ್ಟು 28,21,೦44 ರೂಪಾಯಿ ಪಾವತಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.