ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

0

ರಕ್ಷಾ ಬಂಧನದ ಹಿಂದಿರುವ ಪಾವಿತ್ರ್ಯವನ್ನು ಅರಿಯಬೇಕು : ಚಂದ್ರಕಾಂತ ಗೋರೆ


ಪುತ್ತೂರು: ಅಬಲರನ್ನು ರಕ್ಷಿಸುವ ಸಂದೇಶದ ಸಂಕೇತವಾಗಿ ರಕ್ಷಾಬಂಧನ ಆಚರಣೆಗೆ ಬಂದಿದೆ. ಹಾಗಾಗಿ ಅಣ್ಣ ತಂಗಿಯರ ಬಂಧದ ರೂಪಕವಾಗಿ ರಕ್ಷಾಬಂಧನ ಪ್ರಚಲಿತದಲ್ಲಿದೆ. ಈ ಆಚರಣೆಯ ಹಿಂದಿರುವ ಮಹತ್ವವನ್ನು ಅರಿತು, ಪಾವಿತ್ರ್ಯವನ್ನು ಗೌರವ ಭಾವದಿಂದ ಕಂಡು ರಕ್ಷಾಬಂಧನದ ದಿನವನ್ನು ಆಚರಿಸಬೇಕು ಎಂದು ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಸೋಮವಾರ ಸಂದೇಶ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಇಂಗ್ಲಿಷ್ ವಿಭಾಗ ಮುಖ್ಯಸ್ಥ ಗಣೇಶ ಪ್ರಸಾದ್ ಎ, ಕನ್ನಡ ವಿಭಾಗ ಮುಖ್ಯಸ್ಥೆ ಜಯಂತಿ ಪಿ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಅನನ್ಯಾ ವಿ, ಇಂಗ್ಲಿಷ್ ಉಪನ್ಯಾಸಕಿ ಸಂಧ್ಯಾ ಎಂ, ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ, ಕನ್ನಡ ಉಪನ್ಯಾಸಕ ಗಿರೀಶ ಭಟ್ ಕುವೆತ್ತಂಡ, ವಾಣಿಜ್ಯ ಉಪನ್ಯಾಸಕಿ ಶ್ರೀಕೀರ್ತನಾ, ಕಚೇರಿ ಮುಖ್ಯಸ್ಥೆ ಗಾಯತ್ರೀದೇವಿ, ಮಾಧ್ಯಮ ಕೇಂದ್ರ ಸಹಾಯಕ ಮೋಹನ್ ಆಚಾರ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿಯರೆಲ್ಲರೂ ವಿದ್ಯಾರ್ಥಿಗಳಿಗೆ ರಕ್ಷೆ ಕಟ್ಟುವ ಮುಖೇನ ರಕ್ಷಾಬಂಧನವನ್ನು ಆಚರಿಸಲಾಯಿತು.

LEAVE A REPLY

Please enter your comment!
Please enter your name here