ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ಆಗಸ್ಟ್ 18ರಂದು ನಡೆಯಿತು.
ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. 5000ಮೀ ವಾಕ್ ರೇಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಚೇತನ್ ರೈ 1500ಮೀ ರೇಸ್ ನಲ್ಲಿ ಪ್ರಥಮ ಸ್ಥಾನ ಮತ್ತು 3000ಮೀ ರೇಸ್ ನಲ್ಲಿ ದ್ವಿತೀಯ ಸ್ಥಾನ ,ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಭಾರ್ಗವ್ ರೈ ಕೆ. ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಹರ್ಷಿತ್ ಜಾವೆಲಿನ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಮನೀಶ್ 400ಮೀ. ರೇಸ್ ನಲ್ಲಿ ದ್ವಿತೀಯ ಸ್ಥಾನ ಪಡೆದು, ಈ ವಿದ್ಯಾರ್ಥಿಗಳು ಬೀದರ್ ನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ವಿಜ್ಞಾನ ವಿಭಾಗದ ಅಮಿತ್ ಬೋರ್ಕರ್ ಬಿ. 110 ಹರ್ಡ್‌ಲ್ಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಮತ್ತು 4×400 ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅಮಿತ್ ಬೋರ್ಕರ್ ಬಿ.,ಹರ್ಷಿತ್,ಚೇತನ್ ರೈ,ಮನೀಶ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.