ಈಶ್ವರಮಂಗಲ: ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.19ರಂದು ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.
ಅತಿಥಿ ಶಾಲೆಯ ಆಡಳಿತ ಮಂಡಳಿಯ ಸದಸ್ಯ ಪ್ರವೀಣ್ ರೈ ಮೇನಾಲ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡು ರಕ್ಷಾಬಂಧನ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಿರದೆ ಎಲ್ಲಾ ಸ್ತ್ರೀಯರನ್ನು ಗೌರವ ಭಾವನೆಯಿಂದ ನೋಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಪ್ರಾಂಶುಪಾಲ ಕೆ ಶಾಮಣ್ಣ ಮಾತನಾಡಿ ಹಚ್ಚುವುದಾದರೆ ದೀಪವನ್ನು ಹಚ್ಚು, ಹಚ್ಚದೆ ಇರುವುದಾದರೆ ಬೆಂಕಿಯನ್ನು ಎನ್ನುವ ನುಡಿಮುತ್ತುಗಳನ್ನಾಡಿ ಮಕ್ಕಳಿಗೆ ಶುಭ ಹಾರೈಸಿದರು.
ಶಿಕ್ಷಕಿ ಜಯಶ್ವಿನಿ ರಕ್ಷಾಬಂಧನದ ಮಹತ್ವ ಮತ್ತು ಹಿನ್ನೆಲೆಯನ್ನು ಪೌರಾಣಿಕ ಕಥೆಯ ಮೂಲಕ ಮಕ್ಕಳಿಗೆ ತಿಳಿಸಿದರು. ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಅನಘರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ವೇದಿಕೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯರು ಉಪಸ್ಥಿತರಿದ್ದರು. ಶಿಕ್ಷಕಿ ಗೀತಾ ಸ್ವಾಗತಿಸಿ, ರಾಜೇಶ್ವರಿ ವಂದಿಸಿದರು.ವಿದ್ಯಾರ್ಥಿಗಳಾದ ಅನನ್ಯ ಮತ್ತು ಬಳಗದವರು ಪ್ರಾರ್ಥಿಸಿ,ಶಿಕ್ಷಕಿಯರಾದ ಅಂಜಲಿ ಹಾಗೂ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಶಾಲೆಯ ವತಿಯಿಂದ ರಕ್ಷೆಯನ್ನು ನೀಡಿ, ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟಿಕೊಂಡು ಸಂಭ್ರಮಿಸಿದರು.