ರಾಮಕುಂಜ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ದ.ಕ ಜಿಲ್ಲೆ ಇದರ ಉಪ್ಪಿನಂಗಡಿ ಸ್ಥಳೀಯ ಸಂಸ್ಥೆಯ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆ.17ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಉಪ್ಪಿನಂಗಡಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಕೆ.ಸೇಸಪ್ಪ ರೈಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಉಪ್ಪಿನಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯಧ್ಯಕ್ಷ ಹನುಮಂತಯ್ಯ, ಕೋಶಾಧಿಕಾರಿ ಜನಾರ್ದನ, ಕಾರ್ಯದರ್ಶಿ ಪ್ರೇಮ ಬಿ., ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯಗುರು ಲೋಹಿತಾ ಎ., ತೀರ್ಪಗಾರರಾದ ವಿದ್ಯಾ ಸರಸ್ವತಿ, ಶ್ರೀರಾಮ, ಅನಘಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 2 ಸ್ಕೌಟ್ ತಂಡಗಳು, 4 ಗೈಡ್ ತಂಡಗಳು, 2 ಕಬ್ ತಂಡಗಳು ಮತ್ತು 3 ಬುಲ್ ಬುಲ್ ತಂಡಗಳು ಭಾಗವಹಿಸಿದ್ದರು. ಸ್ಕೌಟ್ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಪ್ರಥಮ ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಗೈಡ್ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಪ್ರಥಮ ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಕಬ್ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಹಾಗೂ ಇಂದ್ರಪ್ರಸ್ಥ ವಿದ್ಯಾಲಯ ದ್ವಿತೀಯ, ಬುಲ್ ಬುಲ್ ವಿಭಾಗದಲ್ಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಪ್ರಥಮ ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.
ಗೈಡ್ ಕ್ಯಾಪ್ಟನ್ ದಿವ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಜನಾರ್ದನ ವಂದಿಸಿದರು. ಉಪ್ಪಿನಂಗಡಿ ಸ್ಥಳೀಯ ಸಂಸ್ಥೆಯ ಶಾಲೆಗಳಿಂದ ಸುಮಾರು ೭೫ ವಿದ್ಯಾರ್ಥಿಗಳು ಮತ್ತು ಸ್ಕೌಟ್ ಮಾಸ್ಟರ್, ಗೈಡ್ ಕ್ಯಾಪ್ಟನ್, ಕಬ್ ಮಾಸ್ಟರ್, ಪ್ಲಾಕ್ ಲೀಡರ್ ಭಾಗವಹಿಸಿದ್ದರು.