ಕೆಯ್ಯೂರು ಗ್ರಾಪಂನಿಂದ ಸಹಾಯಧನ ಚೆಕ್ ವಿತರಣೆ, ಸನ್ಮಾನ ಕಾರ್ಯಕ್ರಮ

0

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರ ಅಧ್ಯಕ್ಷತೆಯಲ್ಲಿ ಆ.15 ರಂದು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಕಟ್ಟತ್ತಾರು ಹಿ.ಪ್ರಾ.ಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶಾರದಾ ಹಾಗೂ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಇಂದಿರಾ, ಕೆಯ್ಯೂರು ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಸುಳ್ಯ ತಾಲೂಕು ಕಛೇರಿಯ ಭೂಮಿಶಾಖೆಗೆ ವರ್ಗಾವಣೆಗೊಂಡ ಸ್ವಾತಿ ಹಾಗೂ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 2023 ನೇ ಸಾಲಿನಲ್ಲಿ 10 ನೇ ತರಗತಿಯ ಪರೀಕ್ಷೆಯಲ್ಲಿ 615 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ ಸೌಜನ್ಯರವರುಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಲಕ್ಷ್ಮೀ ಎಜುಕೇಷನಲ್ ಏಡ್ ಫೌಂಡೇಷನ್‌ನ ವತಿಯಿಂದ ಕೆಪಿಎಸ್ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ಗೈಡ್‌ಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯತ್‌ನ ಶೇ.25 ರ ನಿಧಿಯಿಂದ 5 ಮಂದಿಗೆ ಸಹಾಯಧನ ಚೆಕ್ ವಿತರಣೆ ಮಾಡಲಾಯಿತು.


ವೇದಿಕೆಯಲ್ಲಿ ಕೆಪಿಎಸ್ ಉಪಪ್ರಾಂಶುಪಾಲ ಕೆ.ಎಸ್.ವಿನೋದ್ ಕುಮಾರ್, ಗ್ರಾಪಂ ಉಪಾಧ್ಯಕ್ಷೆ ಸುಮಿತ್ರಾ ಪಲ್ಲತ್ತಡ್ಕ, ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ, ಸದಸ್ಯರುಗಳಾದ ಅಬ್ದುಲ್ ಖಾದರ್ ಮೇರ್ಲ, ಬಟ್ಯಪ್ಪ ರೈ ದೇರ್ಲ, ಜಯಂತ ಪೂಜಾರಿ ಕೆಂಗುಡೇಲು, ವಿಜಯ ಕುಮಾರ್ ಸಣಂಗಳ, ಜಯಂತಿ ಎಸ್.ಭಂಡಾರಿ, ತಾರಾನಾಥ ಕಂಪ, ಮಮತಾ ರೈ, ಮೀನಾಕ್ಷಿ ವಿ.ರೈ, ಗಿರಿಜಾ ಕಣಿಯಾರು, ನೆಬಿಸಾ, ಸುಭಾಷಿಣಿ ಉಪಸ್ಥಿತರಿದ್ದರು. ಸಭೆಯಲ್ಲಿ ದುರ್ಗಾಂಬಿಕಾ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಶಿವಪ್ರಸಾದ್, ರಾಕೇಶ್, ಜ್ಯೋತಿ,ಮಾಲತಿ,ಧರ್ಮಣ್ಣ, ರಫೀಕ್ ತಿಂಗಳಾಡಿ ಸಹಕರಿಸಿದ್ದರು.

LEAVE A REPLY

Please enter your comment!
Please enter your name here