ಕಾವು ನನ್ಯದಲ್ಲಿ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ- ತೀವ್ರ ಗಾಯ

0

ಪುತ್ತೂರು: ಕಾವು ನನ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ ಡಿಕ್ಕಿಯಾದ ಘಟನೆ ಆ.20ರಂದು ನಡೆದಿದೆ.ಘಟನೆಯಲ್ಲಿ ಬಾಲಕಿಗೆ ತೀವ್ರ ಗಾಯವಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಾಡ್ನೂರು ಗ್ರಾಮದ ಮದ್ಲ ಆಚಾರಿಮೂಲೆ ಚಂದ್ರಶೇಖರ್ ಮೂಲ್ಯ ಅವರ ಪುತ್ರಿ ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಂಕಿತ ಅವರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಮದ್ಲದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ನನ್ಯದಲ್ಲಿ ಇಳಿದು ನಡೆದುಕೊಂಡು ಮನೆ ಕಡೆ ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಲಾರಿ ವಿದ್ಯಾರ್ಥಿನಿಗೆ ಡಿಕ್ಕಿಯಾಗಿದೆ. ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here