ಸಬಳೂರು: ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.20ರಂದು ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಶ್ ಶೆಟ್ಟಿ ಚಾಲನೆ ನೀಡಿ ಶುಭಹಾರೈಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ಅಧ್ಯಕ್ಷತೆ ವಹಸಿದ್ದರು. ಕೊಯಿಲ ಗ್ರಾಮ ಪಂಚಾಯಿತಿ ಸದಸ್ಯ ಚಿದಾನಂದ ಪಾನ್ಯಾಲು, ರಾಮಕುಂಜ ಕ್ಲಸ್ಟರ್ ಸಿಆರ್‌ಪಿ ಮಹೇಶ್ ಶುಭಹಾರೈಸಿದರು. ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ ಉಪಸ್ಥಿತರಿದ್ದರು. ಕಡಬ ವಲಯ ಕ್ರೀಡಾಕೂಟದ ನೊಡೇಲ್ ಅಧಿಕಾರಿ ಚಂದ್ರಶೇಖರ ಪ್ರಸ್ತಾವಿಸಿದರು. ಮುಖ್ಯ ಶಿಕ್ಷಕಿ ವಾರಿಜಾ ಬಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವನಜಾ ವಂದಿಸಿದರು. ಶಿಕ್ಷಕ ವೆಂಕಟೇಶ್ ನಿರೂಪಿಸಿದರು.

LEAVE A REPLY

Please enter your comment!
Please enter your name here