ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಾಲಿಬಾಲ್ ಪಂದ್ಯಾಟ

0

ಮುಂಡೂರು ಶಾಲಾ ಬಾಲಕಿಯರ ತಂಡ ಪ್ರಥಮ- ಬಾಲಕರ ತಂಡ ದ್ವಿತೀಯ

ಪುತ್ತೂರು: ಕುಂಬ್ರ ಕೆಪಿಎಸ್ ಮೈದಾನದಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ  ಬಿ ವನಿತಾರವರು ತರಬೇತಿ ನೀಡಿದ್ದು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು, ಸದಸ್ಯ ಅಕ್ಬರ್ ಶಾಫಿ ಹಾಗೂ ಶಿಕ್ಷಕ ವೃಂದದವರು  ಸಹಕಾರ ನೀಡಿದ್ದಾರೆ ಎಂದು ಶಾಲಾ ಮುಖ್ಯಗುರು  ವಿಜಯ ಪಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here