





ಪುತ್ತೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರ ಮೇಲೆ ಪ್ರಕರಣ ದಾಖಲು ಮಾಡುವಂತೆ ಬಿಜೆಪಿ ಪುತ್ತೂರು ಯುವ ಮೋರ್ಚಾದ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು.



ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ಪ್ರಮುಖರು ಪುತ್ತೂರು ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸತೀಶ್ ಜಿ ಜೆ ಅವರಿಗೆ ದೂರು ನೀಡಿದ್ದಾರೆ. ಈ ಸಂದರ್ಭ ಗ್ರಾಮಾಂತರ ಯುವ ಮೋರ್ಚಾ ನೂತನ ಅಧ್ಯಕ್ಷ ಶಿಶಿರ್ ಪೆರ್ವೋಡಿ, ನಗರ ಯುವ ಮೋರ್ಚಾ ನೂತನ ಅಧ್ಯಕ್ಷ ನಿತೇಶ್ ಕಲ್ಲೇಗ ಸಹಿತ ಹಲವಾರು ಮಂದಿ ಮುಖಂಡರು ಉಪಸ್ಥಿತರಿದ್ದರು.













