ಆ.24ಕ್ಕೆ ಕ.ಸಾ. ಪ ಪುತ್ತೂರು- ’ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ -16

0

ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ, ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ’ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-16’ ಕಾರ್ಯಕ್ರಮವು ಶತ ಸಂಭ್ರಮ ಆಡಿಟೋರಿಯಂ ನರಿಮೊಗರು ಶಾಲೆಯಲ್ಲಿ ಆ.24ರಂದು ಬೆಳಗ್ಗಿನಿಂದ ಸಂಜೆಯ ತನಕ ನಡೆಯಲಿದೆ.


ಸ. ಉ. ಹಿ. ಪ್ರಾ ಶಾಲೆ ನರಿಮೊಗರು ಇಲ್ಲಿನ ವಿದ್ಯಾರ್ಥಿನಿ ಪೂಜಾಶ್ರೀ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಭಾಷಣವನ್ನು ಸ. ಹಿ. ಪ್ರಾ. ಶಾಲೆ ಶಾಂತಿಗೋಡು ಇಲ್ಲಿನ ವಿದ್ಯಾರ್ಥಿ ಧವನ್ ಕುಮಾರ್ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದು, ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ಪಂಜಳ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ. ಯು , 20ನೇ ಪುತ್ತೂರು ಕನ್ನಡ ಸಾಹಿತ್ಯ ಸಮ್ಮೇಳನದ ಆಶ್ರಯದಾತರು, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಹಿಂದಾರು, ನರಿಮೊಗರು ಸಿ. ಆರ್. ಪಿ. ಪರಮೇಶ್ವರಿ ಪ್ರಸಾದ್,ನರಿಮೊಗರು ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣರಾಜ ಜೈನ್. ಡಿ ಉಪಸ್ಥಿತರಿರುವರು.

ಈ ಸಂದರ್ಭ 10 ಸಾಧಕರಿಗೆ ಸನ್ಮಾನ ನಡೆಯಲಿದೆ. ವಿವಿಧ ಗೋಷ್ಠಿಗಳು ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಕನ್ನಡದಲ್ಲೂ ಐ ಎ ಎಸ್ ಬರೆಯಿರಿ ಕುರಿತು ಪ್ರಣವ್ ಭಟ್ ಉಪನ್ಯಾಸ ನೀಡಲಿದ್ದಾರೆ. ನರಿಮೊಗರು ಗ್ರಾಮಕ್ಕೆ ಸಂಬಂಧ ಪಟ್ಟ ಸ. ಉ. ಹಿ. ಪ್ರಾ. ಶಾಲೆ ನರಿಮೊಗರು , ಸ. ಉ. ಹಿ. ಪ್ರಾ. ಶಾಲೆ ಮುಕ್ವೆ , ಸ. ಹಿ. ಪ್ರಾ.ಶಾಲೆ ಶಾಂತಿಗೋಡು , ಸ. ಹಿ. ಪ್ರಾ. ಶಾಲೆ ಆನಡ್ಕ , ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು, ಸರಸ್ವತಿ ವಿದ್ಯಾಮಂದಿರ ಪುರುಷರಕಟ್ಟೆ,ಶಾಂತಿಗಿರಿ ವಿದ್ಯಾನಿಕೇತನ ಶಾಲೆ ಪಂಜಳ, ಪಿಎಂಶ್ರೀ ಸ. ಹಿ. ಪ್ರಾ. ಶಾಲೆ ವೀರಮಂಗಲ ಇಲ್ಲಿನ ವಿದ್ಯಾರ್ಥಿಗಳು ವಿವಿಧ ಗೋಷ್ಠಿಗಳಲ್ಲಿ ಭಾಗಿಯಾಗಲಿದ್ದಾರೆ. ಭೋಜನ ವಿರಾಮದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here