ಕಡಬ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

0

ಪ್ರಾಥಮಿಕ / ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಮರ್ದಾಳ ಗುಡ್ ಶೆಪರ್ಡ್ ಶಾಲೆಗೆ ಪ್ರಥಮ ಸ್ಥಾನ

ಮರ್ದಾಳ: ಕಡಬ ವಲಯ ಮಟ್ಟದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗುಡ್‌ಶೆಫರ್ಡ್ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.


ಆ.19ರಂದು ಆಲಂಕಾರಿನಲ್ಲಿ ಶ್ರೀ ದುರ್ಗಾಂಬಾ ಪ.ಪೂ.ಕಾಲೇಜಿನಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಗುಡ್ ಶೆಫರ್ಡ್ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆ.20ರಂದು ಸಬಳೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಗುಡ್ ಶೆಫರ್ಡ್ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.


ಪ್ರೌಢಶಾಲಾ ವಿಭಾಗದಲ್ಲಿ ಅನನ್ಯಾ ಬೆಸ್ಟ್ ಅಟ್ಯಾಕರ್ ಪ್ರಶಸ್ತಿ ಹಾಗೂ ಹರ್ಷಿತಾ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ಎಸ್ ಅವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here