ಬೆಟ್ಟಂಪಾಡಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾದ ಸದಸ್ಯ ಸಂಸ್ಥೆಯ ವತಿಯಿಂದ ಆ. 18 ರಂದು ಮಂಗಳ ಕ್ರೀಡಾಂಗಣ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಧನ್ವಿ ಎಎಂ ಭಾಗವಹಿಸಿ 600 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾಳೆ.