ವಿಟ್ಲ: ಶಕ್ತಿನಗರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26ರಂದು ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.
ಆ.26ರಂದು ಪೂರ್ವಾಹ್ನ ಗಣಪತಿ ಹೋಮ, ಮಹಾ ಪೂಜೆ ನಂತರ ವಿವಿಧ ಭಜನಾ ತಂಡಗಳಿಂದ ನಾಮ ಸಂಕೀರ್ತನೆ, ಮದ್ಯಾಹ್ನ ಮಹಾಪೂಜೆ ಜರುಗಲಿದೆ. ಸಾಯಂಕಾಲ ಗಂಟೆ ೫ರಿಂದ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಅಧ್ಯಯನ ಕೇಂದ್ರದ ಕಲಾವಿದರಿಂದ ರಾಕೇಶ್ ರೈ ಅಡ್ಕ ಇವರ ನಿರ್ದೇಶನ ಹಾಗೂ ರಮ್ಯ ಆಚಾರ್ಯ ಇವರ ಸಂಯೋಜನೆಯಲ್ಲಿ ಶ್ರೀ ಕೃಷ್ಣ ಲೀಲಾಮೃತ ಎಂಬ ಯಕ್ಷಗಾನ ಪ್ರಸಂಗದ ಪ್ರದರ್ಶನ ನಡೆಯಲಿದೆ. ರಾತ್ರಿ 11.30ಕ್ಕೆ ವಿಶೇಷ ಅಲಂಕಾರ ಪೂಜೆ, ಮಹಾಮಂಗಳಾರತಿ ಹಾಗೂ ಶ್ರೀ ಗೋಪಾಲಕೃಷ್ಣ ದೇವರಿಗೆ ಅರ್ಘ್ಯಪ್ರಧಾನ ನಂತರ ಪ್ರಸಾದ ವಿತರಣೆ ನಡೆಯಲಿದೆ.
ಆ.27ರಂದು ಶ್ರೀ ದೇವರಿಗೆ ಲಕ್ಷ ತುಳಸಿ ಅರ್ಚನೆ ನಡೆಯಲಿದೆ ಪ್ರಾತಃಕಾಲ 8.30 ರಿಂದ ಅರ್ಚನೆ ಆರಂಭಗೊಳ್ಳಲಿದೆ ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಜರುಗಿ ಅನ್ನ ಪ್ರಸಾದ ವಿತರಣೆ ನಡೆಯಲಿದೆ. 27 ರಂದು ನಡೆಯಲಿರುವ ಲಕ್ಷ ತುಳಸೀ ಅರ್ಚನೆಗೆ 26ರಂದು ತುಳಸೀ ಪತ್ರೆಗಳನ್ನು ಸಮರ್ಪಿಸಬಹುದಾಗಿದೆ ಎಂದು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಡಾ ಕೆ.ಸಿ ನಾಯ್ಕ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.