ನಾಳೆ (ಆ.23) ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಆ.23ರಂದು ವರಮಹಾಲಕ್ಷ್ಮೀ ಪೂಜೆ ಜರಗಲಿರುವುದು.


ಶ್ರಾವಣ ಮಾಸದ ಮೂರನೇ ಶುಕ್ರವಾರದ ಪ್ರಯುಕ್ತ ಸಂಜೆ 4ರಿಂದ ವರಮಹಾಲಕ್ಷ್ಮೀ ಪೂಜೆ ಪ್ರಾರಂಭಗೊಂಡು ಸಂಜೆ 6ಕ್ಕೆ ಮಹಾಪೂಜೆ ನಡೆಯಲಿದೆ.

ರಾತ್ರಿ 7ರಿಂದ ಎಸ್‌.ಎಲ್‌.ವಿ.ಟಿ. ಮಹಿಳಾ ಭಜಕ ವೃಂದದವರಿಂದ ಭಜನೆ, ರಾತ್ರಿ 8ಕ್ಕೆ ಶಾರದಾ ಮಾತೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಮಂದಿರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here