ವಿದ್ಯಾರ್ಥಿಗಳಿದ್ದ ರಿಕ್ಷಾ ಹಾಗೂ ಕಾರಿನ ನಡುವೆ ಅಪಘಾತ – ಹಾರಾಡಿ ಬಳಿ ಘಟನೆ

0

ಪುತ್ತೂರು: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಹಾಗೂ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಕೆಲ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬೊಳುವಾರು-ಹಾರಾಡಿ ನಡುವೆ ಇಂದು ಸಾಯಂಕಾಲ ಸಂಭವಿಸಿದೆ.

ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಪುತ್ತೂರಿನಿಂದ ಹಾರಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ಕೂಡಲೇ ‍ಸ್ಥಳೀಯರು ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

LEAVE A REPLY

Please enter your comment!
Please enter your name here