ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ(ಸ್ವಾಯತ್ತ) ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು “ಸ್ಪಷ್ಟವಾದ ಗುರಿ ಅಂತೆಯೇ ಗುರುವಿನ ಸಹಕಾರ, ಪ್ರೋತ್ಸಾಹಗಳು ಸಕಾಲದಲ್ಲಿ ದೊರೆತು ಛಲ ಏಕಾಗ್ರತೆಗಳನ್ನು ಜೊತೆಗೂಡಿಸಿಕೊಂಡಾಗ,ವಿದ್ಯಾರ್ಥಿಯೊಬ್ಬ ಸಂಪೂರ್ಣ ಗೆಲುವನ್ನು ಸಾಧಿಸಲು ಸಾಧ್ಯ. ಕಲಿಕೆಯೆಡೆಗಿನ ಬದ್ಧತೆ, ಶ್ರದ್ಧೆ ನಮ್ಮನ್ನು ಯಶಸ್ಸಿನೆಡೆಗೆ ಕರೆದೊಯ್ಯುತ್ತದೆ. ಅನಾವಶ್ಯಕವಾದ ವಿಚಾರಗಳನ್ನು ಬದಿಗಿರಿಸಿ, ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡಾಗ ಸ್ವಾಭಾವಿಕವಾಗಿ ನಮ್ಮ ವ್ಯಕ್ತಿತ್ವ ಬೆಳಗುತ್ತದೆ. ವಿದ್ಯಾರ್ಥಿಗಳ ಆಲೋಚನೆಗಳು ಎಂದಿಗೂ ಸಕಾರಾತ್ಮಕವಾಗಿರಲಿ” ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ಕುಶಲತ ಎಂ ಹಾಗೂ ಡೊನಾಲ್ಡ್ ಡಿʼಸೋಜ ಆಗಮಿಸಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್ ರೈ ವಹಿಸಿಕೊಂಡು, ಕಾಲೇಜಿನ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಉಪನ್ಯಾಸಕಿ ಮಮತಾ ಶೆಟ್ಟಿ ಸ್ವಾಗತಿಸಿ,ನಿರೂಪಿಸಿ,ವಂದಿಸಿದರು.