ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ – ಬಾಲವರ್ಗದಲ್ಲಿ ರಾಮಕುಂಜ ಆ.ಮಾ.ಶಾಲಾ ಬಾಲಕರ ತಂಡ ರಾಜ್ಯ ಮಟ್ಟಕ್ಕೆ

0

ರಾಮಕುಂಜ: ಆ.21ರಂದು ಪುತ್ತೂರು ನೆಹರೂನಗರ ವಿವೇಕಾನಂದ ಪದವಿಪೂರ್ವ ಕಾಲೇಜುನಲ್ಲಿ ನಡೆದ ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲವರ್ಗ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ದಿವ್ಯಾ ಪಿ ಎನ್ ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here