ಕಡಬ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ – ರಾಮಕುಂಜ ಆ.ಮಾ.17ರ ವಯೋಮಾನದ ಬಾಲಕರ ತಂಡ ಪ್ರಥಮ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಯೋಗದಲ್ಲಿ ಆಲಂಕಾರು ಶ್ರೀ ದುರ್ಗಾಂಬಾ ಪ್ರೌಢಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 17ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ ಬಿ, ರಾಘವ, ಕಿಶನ್ ರಾಜ್ ರೈ ಹಾಗೂ ದಿವ್ಯ ಪಿ ಎನ್ ರವರು ತರಬೇತಿ ನೀಡಿರುತ್ತಾರೆ. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ, ಆಡಳಿತಾಧಿಕಾರಿ ಆನಂದ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here