ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ – ರಾಮಕುಂಜ ಆ.ಮಾ.ಶಾಲೆಯ ಬಾಲವರ್ಗ ಬಾಲಕಿಯರ, ಕಿಶೋರ ವರ್ಗ ಬಾಲಕರ ತಂಡ ದ್ವಿತೀಯ

0

ರಾಮಕುಂಜ: ಆ.12ರಂದು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಬಾಲವರ್ಗ ಬಾಲಕಿಯರ ತಂಡ ಹಾಗೂ ಕಿಶೋರ ವರ್ಗದ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್, ಕಿಶನ್‌ರಾಜ್ ರೈ ಹಾಗೂ ದಿವ್ಯಾ ಪಿ ಎನ್ ಇವರು ತರಬೇತಿ ನೀಡಿರುತ್ತಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here