ಪುತ್ತೂರು: ಇರ್ದೆ ಉಪ್ಪಳಿಗೆ ಹಿ.ಪ್ರಾ.ಶಾಲೆಯಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಿತು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಸರೋಳಿಕಾನ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಲೋಕನಾಥ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ರೈ ಬೈಲಾಡಿ, ನೋಟರಿ ವಕೀಲ ಚಿದಾನಂದ ಬೈಲಾಡಿ, ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಕೃಷ್ಣ ಪ್ರಸಾದ ಆಳ್ವ, ಪುತ್ತೂರು ಗ್ರಾಮಾಂತರ ವಲಯ ಪ್ರಾಥಮಿಕ ಶಾಲಾ ವಿಭಾಗದ ನೋಡಲ್ ಅಧಿಕಾರಿ ಸೀತಾರಾಮ ಗೌಡ, ಪ್ರೌಢಶಾಲಾ ವಿಭಾಗದ ಅಧಿಕಾರಿ ಸುಧೀರ್ ರೈ, ಸುಧಾಕರ ರೈ ಅಧ್ಯಕ್ಷರು ಪುತ್ತೂರು ತಾಲೂಕು ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧಾಕರ ರೈ ಗಿಳಿಯಾಲು, ಗ್ರೇಡ್ 2 ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ಯಾಮಲಾ, ಪ್ರೌಢಶಾಲಾ ಮುಖ್ಯಗುರು ಅನ್ನಮ್ಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಾಸ್‌ಪ್ರಕಾಶ್ ರೈ, ಶಾಲಾ ಮುಖ್ಯಗುರು ಲಿಂಗಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಪಾರ್ವತಿ, ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಗುರುಗಳಾದ ಲಿಂಗಮ್ಮ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿಗಳು, ಶಿಕ್ಷಕಿ ಪುಷ್ಪಾವತಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವಾಣಿಶ್ರೀ ಬಹುಮಾನ ವಿಜೇತರ ಹೆಸರು ವಾಚಿಸಿದರು. ಸಹಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ಪಂದ್ಯಾಟದ ಫಲಿತಾಂಶ
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಪಾಪೆಮಜಲು ಪ್ರಥಮ ಸ್ಥಾನ, ಷಣ್ಮುಖ ದೇವ ಪ್ರೌಢಶಾಲೆ ಪೆರ್ಲಂಪಾಡಿ ದ್ವಿತೀಯ ಸ್ಥಾನ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಪಾಪೆಮಜಲು ಪ್ರಥಮ ಸ್ಥಾನ, ಗಜಾನನ ಆಂಗ್ಲಮಾಧ್ಯಮ ಶಾಲೆ ಈಶ್ವರಮಂಗಲ ದ್ವಿತೀಯ ಸ್ಥಾನ, ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲಂಪಾಡಿ ಪ್ರಥಮ ಸ್ಥಾನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ದ್ವಿತೀಯ ಸ್ಥಾನ, ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ಪ್ರಥಮ ಸ್ಥಾನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಪೆಮಜಲು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.