ಕಡಬ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ-ರಾಮಕುಂಜ ಆ.ಮಾ.ಶಾಲೆಯ 14ರ ವಯೋಮಾನದ ಬಾಲಕರ ತಂಡ ಪ್ರಥಮ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಯೋಗದಲ್ಲಿ ಸಬಳೂರು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ ಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ ಬಿ, ರಾಘವ ಹಾಗೂ ದಿವ್ಯ ಪಿ ಎನ್ ರವರು ತರಬೇತಿ ನೀಡಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ, ಆಡಳಿತಾಧಿಕಾರಿ ಆನಂದ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here