ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಮಹಿಳಾ ಸುರಕ್ಷತೆ ಜಾಗೃತಿ ಕಾರ್ಯಕ್ರಮ

0

ಮೇನಾಲ :ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಶಾಲಾ ವಿದ್ಯಾರ್ಥಿನಿಯರಿಂದ ಮಹಿಳೆ ಮತ್ತು ಹೆಣ್ಣುಮಕ್ಕಳ ಸುರಕ್ಷತೆಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

“ಜೀವ ಉಳಿಸುವ ವೈದ್ಯರನ್ನು ದೇವರಂತೆ ಕಾಣಬೇಕು” .ಆದರೆ ಕೋಲ್ಕತ್ತಾದ ಆರ್.ಜಿ.ಆರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿಯ ಅತ್ಯಾಚಾರ ಮತ್ತು ಕೊಲೆ ಅಮಾನವೀಯ ಕೃತ್ಯವಾಗಿದೆ. ದೇಶದ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಪ್ರಶ್ನೆಮೂಡುವಂತಾಗಿದೆ ಎಂದು ವಿದ್ಯಾರ್ಥಿಗಳು ವಿಷಾಧನೀಯ ವ್ಯಕ್ತಪಡಿಸಿದರು.

ಹೆಣ್ಣುಮಕ್ಕಳ ಸುರಕ್ಷತೆ ನಮ್ಮ ಹೊಣೆ”, ” ನ್ಯಾಯಕ್ಕಾಗಿ ಹೋರಾಡೋಣ” ಎಂದು ಉಲ್ಲೇಖಿತವಾಗಿರುವ ಪೋಸ್ಟರ್ ಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು ವೈದ್ಯೆಯ ಹತ್ಯೆ ಮತ್ತು ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಯ ಕಠಿಣ ಶಿಕ್ಷೆಗಾಗಿ ಒತ್ತಾಯಿಸುತ್ತೇವೆ ನಮ್ಮ ಹೋರಾಟ ನ್ಯಾಯಕ್ಕಾಗಿ ಎಂದು ಹೇಳಿದರು.

ದೇಶದಲ್ಲಿ ಪದೇ ಪದೇ ನಡೆಯುವ ಇಂತಹ ಕೃತ್ಯದಿಂದ ಮಾನಸಿಕ, ಆಂತರಿಕ ಭಾವನೆಗಳಿಗೆ ಧಕ್ಕೆಯಾಗಿದೆ.ಕಾನೂನಾತ್ಮಕವಾಗಿ ಹೊಸ ಬದಲಾವಣೆಗಳನ್ನು ತರುವ ಪ್ರಯತ್ನ ಮಾಡಬೇಕೆಂಬ ಆಶಯವನ್ನು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here