ಆ.25-26 ಬಲ್ನಾಡು ಉಜ್ರುಪಾದೆಯಲ್ಲಿ ಮೊಸರುಕುಡಿಕೆ ಉತ್ಸವದ ಬೆಳ್ಳಿಹಬ್ಬ

0

ಪುತ್ತೂರು:ಬಲ್ನಾಡು ಉಜ್ರುಪಾದೆ ಶ್ರೀಕೃಷ್ಣ ಜನ್ಮಾಷ್ಠಮಿಯ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಬೆಳ್ಳಿ ಹಬ್ಬವು ಆ.25 ಹಾಗೂ 26ರಂದು ಬಲ್ನಾಡು ವಿನಾಯಕ ನಗರದ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮಿಸಲಿದೆ ಎಂದು ಸಮಿತಿ ಗೌರವಾಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.


ಆ.23ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 24 ವರ್ಷಗಳಿಂದ ಉಜ್ರುಪಾದೆಯ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯು ಮೊಸರು ಕುಡಿಕೆ ಉತ್ಸವಕ್ಕೆ ಸೀಮಿತವಾಗಿರದೆ ಸಾರ್ವಜನಕ ಸೇವಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದೆ. ಉಜ್ರುಪಾದೆ ಶಾಲೆಯ 7 ಮತ್ತು 8ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ವೈದ್ಯಕೀಯ ಚಿಕಿತ್ಸೆಗೆ ನೆರವು, ಉಜ್ರುಪಾದೆ ಪಳ್ಳತ್ತಾರಿನಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ, ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ಸೋಣ ಶನಿವಾರದ ದಿನ ಅನ್ನದಾನ ಸೇರಿದಂತೆ ಹಲವು ರೀತಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದರು.


ಆ.25ರಂದು ಬೆಳಿಗ್ಗೆ ಬೆಳ್ಳಿ ಹಬ್ಬದ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದ್ದು ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕ ರವಿಚಂದ್ರ ನೆಲ್ಲಿತ್ತಾಯ ಉದ್ಘಾಟಿಸಲಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರ ಸಭಾ ಸದಸ್ಯರು, ವಾಸ್ತು ತಜ್ಞರಾಗಿರುವ ಪಿ.ಜಿ ಜಗನ್ನಿವಾಸ ರಾವ್, ನಿವೃತ್ತ ಟೆಲಿಕಾಂ ಉದ್ಯೋಗಿ ಜನಾರ್ದನ ಗೌಡ, ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನಿಕಟಪೂರ್ವ ಅಧ್ಯಕ್ಷ ಮಾಧವ ಗೌಡ ಕಾಂತಿಲ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಶಿಕ್ಷಕಿ ಸುನೀತಾ ಮೋಹನ್ ಪೂಜಾರಿ, ಎನ್.ಟಿ ಅರುಣಾ ಕೃಷ್ಣ ಕಿಶೋರ್ ಓಟೆ, ನಿವೃತ್ತ ಮುಖ್ಯಗುರು ಮೀನಾಕ್ಷಿ ವಿನಾಯಕನಗರ, ನಗರ ಸಭಾ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಬಲ್ನಾಡು ಗ್ರಾ.ಪಂ ಸದಸ್ಯರಾದ ಗಣೇಶ್ ಗೌಡ ಬ್ರಹ್ಮರಕೋಡಿ, ಕೃಷ್ಣಪ್ಪ ನಾಯ್ಕ ಅಂಬಟೆಮೂಲೆ, ಗುತ್ತಿಗೆದಾರ ಭರತ್ ಚನಿಲ ಹಾಗೂ ವಿನಾಯಕನಗರ ಸ್ವಾಮಿ ಕೊರಗಜ್ಜ ಕ್ಷೇತ್ರದ ಬಾಬು ವಿನಾಯಕ ನಗರ ಅತಿಥಿಗಳಾಗಿ ಆಗಮಿಸಲಿದ್ದಾರೆ.


ವಿವಿಧ ಸ್ಪರ್ಧೆಗಳು:
ಸಭಾ ಕಾರ್ಯಕ್ರಮದ ಬಳಿಕ ಎರಡು ದಿನಗಳ ಕಾಲ ಅಂಗನವಾಡಿ ಪುಟಾಣಿಗಳು, ಮಕ್ಕಳು, ಮಹಿಳೆಯರು, ಪುರುಷರಿಗಾಗಿ ಪ್ರತ್ಯೇಕ ಪ್ರತ್ಯೇಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.


ಆ.26 ಸಂಜೆ ಸಮಾರೋಪ:
ಬೆಳ್ಳಿ ಹಬ್ಬ ಸಂಭ್ರಮದಲ್ಲಿ ಆ.26ರಂದು ಬೆಳಿಗ್ಗೆ ಭಜನೆ, ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಪ್ರಕಾಶ್ ಕೆಲ್ಲಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರಿನ ಮಾಜಿ ಸಂಸದರು, ಖ್ಯಾತ ಅಂಕಣಕಾರರಾಗಿರುವ ಪ್ರತಾಪ್ ಸಿಂಹ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ಖ್ಯಾತ ವೈದ್ಯ ಡಾ.ಎಂ.ಕೆ ಪ್ರಸಾದ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಕರ್ನಾಟಕ ಪ್ರಾಂತ ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ, ಉದ್ಯಮಿಗಳಾದ ಉಜ್ವಲ್ ಕುಮಾರ್ ಪ್ರಭು, ಸಹಜ್ ರೈ ಹಾಗೂ ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಭಟ್ ಸಹಿತ ಹಲವು ಮಂದಿ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುತ್ತೂರು ಜಗದೀಶ್ ಆಚಾರ್ಯ ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದರು.


ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷರಾದ ರವಿಕೃಷ್ಣ ಭಟ್ ಕಲ್ಲಾಜೆ, ಪರಮೇಶ್ವರಿ ಭಟ್ ಬಬ್ಬಿಲಿ, ಅಧ್ಯಕ್ಷ ಪ್ರಕಾಶ್ ಕೆಲ್ಲಾಡಿ, ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಕೋಶಾಧಿಕಾರಿ ಅಶೋಕ್ ಕುಮಾರ್ ಪದವು ಹಾಗೂ ಉಪಾಧ್ಯಕ್ಷ ಕಿರಣ್ ಕುಮಾರ್ ರೈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here