ಪುತ್ತೂರು:ಪುರುಷರಕಟ್ಟೆ ಶಿವಕೃಪ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.25ರಂದು ಅಪರಾಹ್ನ ನರಿಮೊಗರು ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಜರಗಲಿದೆ. ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿರವರು ಮಹಾಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಿ.ಸಿ ರೋಡು ಮೂರ್ತೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿರವರು ಭಾಗವಹಿಸಲಿದ್ದಾರೆ ಎಂದು ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷೆ ಪದ್ಮಾವತಿ ಮುಂಡೋಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಶನ್ ಎಂ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.