ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಗೀತಾ (60) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಆ.21ರ ಬುಧವಾರದಂದು ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇವರು, ಪೆರ್ನೆ ಎಂಬಲ್ಲಿ ಬಸ್ಸಿನ ಮುಂಬಾಗಿಲಿನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಪುತ್ತೂರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರದಂದು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಘಟನೆಯ ಪ್ರತ್ಯಕ್ಷದರ್ಶಿ ಅಶ್ರಫ್ ಎಂಬವರು ನೀಡಿದ ದೂರಿನಂತೆ ಕೆಎಸ್ಸಾರ್ಟಿಸಿ ಬಸ್ ಚಾಲಕ ಅರ್ಜುನ್ ಹಾಗೂ ನಿರ್ವಾಹಕ ಮಂಜುನಾಥ್ ಅವರ ವಿರುದ್ಧ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.