ಸವಣೂರು: ಬಸ್ ನಿಲ್ಲಿಸಿಲ್ಲವೆಂದು ಬಸ್ ಚಾಲಕನಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಯಿಂದಲೇ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಆ.23ರಂದು ನಡೆದಿದೆ.
ಸವಣೂರು ಪೆಟ್ರೋಲ್ ಪಂಪ್ ಬಳಿಯಿರುವ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ ಆರ್ ಟಿಸಿ ಸಿಬ್ಬಂದಿಯೋರ್ವರು ಬಸ್ ನಿಲ್ದಾಣದ ಸಮೀಪವೇ ಬಸ್ಸು ನಿಲ್ಲಿಸಿಲ್ಲವೆಂದು ಆರೋಪಿಸಿ ಚಾಲಕ ಭರತ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ ನಾರಾಯಣ ಅವರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಕೂಡಲೇ ಚಾಲಕ ಬಸ್ ನಿಲ್ಲಿಸಿ ಬಸ್ ನಿಂದ ಇಳಿದಿದ್ದಾರೆ.
ಬಸ್ ನಲ್ಲಿದ್ದ ಸಹಪ್ರಯಾಣಿಕರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ನಾರಾಯಣ ಅವರು ಚಾಲಕನನ್ನು ಪ್ರಶ್ನಿಸುವುದು, ಪೊಲೀಸರಿಗೆ ದೂರು ನೀಡಲು ಮುಂದಾದ ಚಾಲಕ ದಾಖಲಾದ ಅಸ್ಪತ್ರೆಗೆ ಹಲ್ಲೆ ನಡೆಸಿದ ಎನ್ನಲಾದ ಸಿಬ್ಬಂದಿ ಹಾಗೂ ಇನ್ನೋರ್ವ ಸಿಬ್ಬಂದಿ ಮಾತುಕತೆ ನಡೆಸುವುದು, ಇದಕ್ಕೆ ಚಾಲಕನ ಸಂಬಂಧಿಕರು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.
ಹಲ್ಲೆಗೊಳಗಾದ ಚಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬಸ್ ಚಾಲಕ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ. ಹಲ್ಲೆ ಖಂಡಿಸಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ಸಿಬ್ಬಂದಿಗಳು ನಿರ್ಧರಿಸಿದ್ದಾರೆ. ಬಳಿಕದ ಬೆಳವಣಿಗೆಯಲ್ಲಿ ಹಲ್ಲೆ ನಡೆಸಿದವರ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.