ಪುತ್ತೂರು: ವಿಶ್ವಹಿಂದೂ ಪರಿಷದ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪುತ್ತೂರು ಜಿಲ್ಲೆ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.31ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 14ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆಯ ಪೂರ್ವಭಾವಿಯಾಗಿ ನಿರಂತರ ನಡೆಯಲಿರುವ ವಿವಿಧ ಸ್ಪರ್ಧೆಗಳಿಗೆ ಆ.24ರಂದು ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟದ ಮೂಲಕ ಚಾಲನೆ ನೀಡಲಾಯಿತು.
ಕಬಡ್ಡಿ ಪಂದ್ಯಾಟವನ್ನು ಬೆಳಿಗ್ಗೆ ಹೊಟೇಲ್ ಅಶ್ವಿನಿ ಇದರ ಮಾಲಕ ಅಶ್ವಿನ್ ರೈ ಕಬಡ್ಡಿ ಅಂಕಣದ ಉದ್ಘಾಟಿಸಿ ಮಾತನಾಡಿ, ನೂರರಾರು ಮಂದಿಯ ಜೋಡಣೆಯೊಂದಿಗೆ ಸಂಘ ಶಕ್ತಿಯನ್ನು ಕಂಡಿದೆ. ಈ ಸಂಘಟನೆ ವಿಶ್ವಹಿಂದು ಪರಿಷದ್ ಮೂಲಕ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಇಲ್ಲಿ ಎಲ್ಲರಿಗೂ ಅವಕಾಶ ಸಿಗಲಿ. ಹತ್ತಾರು ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು. ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಮೊಸರುಕುಡಿಕೆ ಉತ್ಸವ ಸಮಿತಿ ಕಾರ್ಯದರ್ಶಿ ಜಗದೀಶ್ ನೀರ್ಪಾಜೆ, ವಿಶ್ವಹಿಂದು ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ,ಜಯಂತ್ ಕುಂಜೂರುಪಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.