ವಿಟ್ಲ: ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಬಂದು ಸಾಯಬೇಕಾಗುತ್ತದೆ, ಒಳ್ಳೆಯ ಚಟ ಇರಲಿ, ಕೆಟ್ಟ ಚಟ ಬೇಡ ಎಂದು ಜಯರಾಮ ಪೂಜಾರಿ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಣಿ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾಭಿವರ್ಧಕ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ಕಿರಣ್ ಹೆಗ್ಡೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಸುಧಾಕರ ಸಫಲ್ಯ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮಾಣಿ ಗ್ರಾ.ಪಂ. ಅಧ್ಯಕ್ಷರಾದ ಇಬ್ರಾಹಿಂ ಕೆ., ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಎಸ್. ಚೆನ್ನಪ್ಪ ಗೌಡ ಸ್ವಾಗತಿಸಿ, ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ವಂದಿಸಿ, ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ ಕಾರ್ಯಕ್ರಮ ನಿರೂಪಿಸಿದರು.