ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ – 728 ಕೋಟಿ ರೂ.ಗಳ ದಾಖಲೆಯ ವ್ಯವಹಾರ- ರೂ.1.65 ಕೋಟಿ ಲಾಭ, ಶೇ.16 ಡಿವಿಡೆಂಡ್

0

ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 22 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 14 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ ಸಂಘವು 728 ಕೋಟಿ ರೂ.ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ.1.65 ಕೋಟಿ ರೂ. ಗಳಷ್ಟು ಲಾಭವನ್ನು ಗಳಿಸಿದ್ದು, ಸದಸ್ಯರಿಗೆ ಶೇ.16 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರು ಘೋಷಣೆ ಮಾಡಿದ್ದಾರೆ.


ಆ.24ರಂದು ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಸಭಾಂಗಣದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ಜಿಲ್ಲೆಯಲ್ಲಿ ಒಟ್ಟು 14 ಶಾಖೆಗಳನ್ನು ಹೊಂದಿದ್ದು, ವರ್ಷಾಂತ್ಯಕ್ಕೆ ಸಂಘದಲ್ಲಿ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 8524 ಸದಸ್ಯರಿದ್ದು ಒಟ್ಟು 3.22 ಕೋಟಿ ರೂ. ಗಳಷ್ಟು ಪಾಲು ಬಂಡವಾಳವನ್ನು ಹೊಂದಿರುತ್ತದೆ. ಸಂಘವು 131.93 ಕೋಟಿ ರೂ. ಠೇವಣಿಯನ್ನು ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 13.36 ರಷ್ಟು ಹೆಚ್ಚಳವಾಗಿದೆ. ರೂ. 109.74 ಕೋಟಿ ರೂ.ಗಳಷ್ಟು ಹೊರಬಾಕಿ ಸಾಲ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.20.67 ರಷ್ಟು ಹೆಚ್ಚಳವಾಗಿದೆ. ಸಂಘವು 2.30 ಕೋಟಿ ರೂ.ಗಳಷ್ಟು ಕ್ಷೇಮ ನಿಧಿ ಮತ್ತು 1.97 ಕೋಟಿ ರೂ. ಗಳಷ್ಟು ಇತರ ನಿಧಿಗಳನ್ನು ಹೊಂದಿ, ರೂ. 138.89 ಕೋಟಿಗಳಷ್ಟು ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿರುವ ಮತ್ತು ಆಡಿಟ್ ವರ್ಗದಲ್ಲಿ ಸತತವಾಗಿ ’ಎ’ ತರಗತಿಯನ್ನು ಕಾಯ್ದುಕೊಂಡು ಬಂದಿರುವ ಏಕೈಕ ಸಂಘವಾಗಿರುತ್ತದೆ.

ಮುಂದಿನ ವರ್ಷ 2 ಶಾಖೆಯ ಗುರಿ:
ಮಂಗಳೂರಿನ ಪಡೀಲ್ ನಲ್ಲಿ ಮತ್ತು ಕಲ್ಲಡ್ಕದಲ್ಲಿ ಶಾಖೆಯನ್ನು ತೆರಯಲಾಗುವುದು. ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡವನ್ನು ಹೊಂದುವ ಉದ್ದೇಶದಿಂದ ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ ನೂತನ ಕೇಂದ್ರ ಕಚೇರಿಯ ಕಾಮಗಾರಿ ಪ್ರಗತಿಯಲ್ಲಿದೆ. ಸಂಘಕ್ಕೆ 25 ವರ್ಷ ಪೂರೈಸುವುದರೊಳಗೆ ಕಟ್ಟಡ ನಿರ್ಮಾಣದ ಕೆಲಸ ಪೂರ್ತಿಗೊಳಿಸಿ ಲೋಕಾರ್ಪಣೆ ಮಾಡಲಾಗುವುದು. ಮುಂದೆ ಮಹಾಸಭೆಗಳನ್ನು ಅಲ್ಲೇ ನಡೆಸಲಾಗುವುದು ಎಂದು ಸೀತಾರಾಮ ರೈ ಹೇಳಿದರು.

ಉಪಾಧ್ಯಕ್ಷ ಯನ್.ಸುಂದರ ರೈ ಸವಣೂರು, ನಿರ್ದೇಶಕ ಎನ್.ಜಯಪ್ರಕಾಶ್ ರೈ ಚೊಕ್ಕಾಡಿ, ಕೆ.ರವೀಂದ್ರನಾಥ ಶೆಟ್ಟಿ ಕೇನ್ಯ, ಚಿಕ್ಕಪ್ಪ ನಾೖಕ್‌ ಅರಿಯಡ್ಕ, ಬಿ.ಮಹಾಬಲ ರೈ ಬೋಳಂತೂರು, ಎಸ್.ಯಂ. ಬಾಪು ಸಾಹೇಬ್ ಸುಳ್ಯ, ಯನ್. ರಾಮಯ್ಯ ರೈ ಕೆದಂಬಾಡಿ, ವಿ.ವಿ ನಾರಾಯಣ ಭಟ್ ನರಿಮೊಗರು, ಅಶ್ವಿನ್ ಎಲ್.ಶೆಟ್ಟಿ ಸವಣೂರು,ಸೀತಾರಾಮ ಶೆಟ್ಟಿ ಬಿ. ಮಂಗಳೂರು, ಮಹಾದೇವ ಎಂ. ಮಂಗಳೂರು, ಯಮುನಾ ಎಸ್ ರೈ, ಪೂರ್ಣಿಮ ಎಸ್ ಆಳ್ವ, ಗುತ್ತುಪಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ‍್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ, ನಲ್ಕ ಗೋಪಾಲಕೃಷ್ಣ ಆಚಾರ್ಯ, ರಾಮಚಂದ್ರ, ಜಗನ್ನಾಥ ರೈ ಸಲಹೆ ಸೂಚನೆ ನೀಡಿದರು. ಶ್ರಮಿತಾ ಸ್ವಾಗತಿಸಿದರು. ಮಹಾಪ್ರಬಂಧಕ ವಸಂತ ಜಾಲಾಡಿಯವರು ವರದಿ ವಾಚಿಸಿದರು. ಶ್ರೀಧರ್ ವಂದಿಸಿದರು.

LEAVE A REPLY

Please enter your comment!
Please enter your name here