ಪುತ್ತೂರು: ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯುತ್ ಕಂಬ ಹತ್ತುವ ತರಬೇತಿಯನ್ನು ಆಯೋಜಿಸಲಾಗಿದ್ದು, ಅರ್ಹ ಫಾಲನುಭವಿಗಳು ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಟ್ರಸ್ಟ್ ಅಧ್ಯಕ್ಷ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಪುತ್ತೂರು ತಾಲೂಕು ಸೇರಿದಂತೆ ದ.ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮೆಸ್ಕಾಂ ಪವರ್ ಮ್ಯಾನ್‌ಗಳ ಕೊರತೆಯಿದ್ದು, ಪವರ್ ಮ್ಯಾನ್ ನೇಮಕಾತಿ ವೇಳೆ ಸ್ಥಳೀಯರಿಗೆ ಅವಕಾಶ ಕಲ್ಪಿಸಿ ಕೊಡುವಂತೆ ಶಾಸಕ ಅಶೋಕ್ ರೈ ಗಳು ಇಂಧನ ಸಚಿವರಲ್ಲಿ ಮನವಿ ಮಾಡಿದ್ದರು.
ಪವರ್ ಮ್ಯಾನ್‌ಗಳ ಆಯ್ಕೆಗಾಗಿ ಪ್ರಾರಂಭದಲ್ಲಿ ವಿದ್ಯುತ್ ಕಂಬ ಹತ್ತುವ ತರಬೇತಿಯನ್ನು ಟ್ರಸ್ಟ್ ಮೂಲಕ ಆಯೋಜಿಸಲಾಗಿದೆ.
ಸಲ್ಲಿಸಬೇಕಾದ ದಾಖಲೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ತಮ್ಮ ಆಧಾರ್ ಕಾರ್ಡು, ಫಿಟ್‌ನೆಸ್ ಪ್ರಮಾಣಪತ್ರ, ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ, ಮನವಿ ಹಾಗೂ ಫೋಟೋವನ್ನು ಸಲ್ಲಿಸತಕ್ಕದ್ದು. 18 ರಿಂದ 35 ವಯೋಮಾನದವರಿಗೆ ಮಾತ್ರ ತರಬೇತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಇರುತ್ತದೆ.