ನಾಳೆ (ಆ.25): ಬೆಟ್ಟಂಪಾಡಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ವಿವಿಧ ಸ್ಪರ್ಧೆಗಳು

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೆ. 7, 8ರಂದು ನಡೆಯಲಿರುವ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಲುವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳು ಆ. 25ರಂದು ಶ್ರೀ ಕ್ಷೇತ್ರ ಬೆಟ್ಟಂಪಾಡಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ.

ಅಪರಾಹ್ನ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ‌. ಮುಖ್ಯ ಅತಿಥಿಯಾಗಿ ಪಟ್ಟೆ ಅರ್ತ್‌ಮೂವರ್ಸ್ ನ ಉದ್ಯಮಿ ರಾಧಾಕೃಷ್ಣ ರೈ ಪಟ್ಟೆ ಭಾಗವಹಿಸಲಿದ್ದಾರೆ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ರೈ ಬಾಜುವಳ್ಳಿ ಉಪಸ್ಥಿತರಿರಲಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here