ಆ.26: ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

0

ಪುಣಚ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ಸಮಿತಿ ಪುಣಚ ಇವರ ಆಶ್ರಯದಲ್ಲಿ ನಡೆಯುವ ೨೨ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ.26ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದ ಎದುರುಗದ್ದೆಯಲ್ಲಿ ನಡೆಯಲಿದೆ.
ಬೆಳಿಗ್ಗೆ ದೇವಿ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರಿಂದ ಪ್ರಾರ್ಥನೆ, ಬಳಿಕ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳ ಆರಂಭ,ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ.
ಸಾಯಂಕಾಲ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ಸಮಿತಿಯ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here