ಪುತ್ತೂರು ಗ್ರಾಮಾಂತರ ವಲಯದ ಪ್ರೌಢಶಾಲಾ ಮಟ್ಟದ ವಾಲಿಬಾಲ್ ಪಂದ್ಯಾಟ – ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಪ್ರೌಢಶಾಲೆ ಪ್ರಥಮ

0

ಪುತ್ತೂರು: ಇರ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ಪುತ್ತೂರು ಗ್ರಾಮಾಂತರ ವಲಯದ ಪ್ರೌಢ ಶಾಲಾ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮತ್ತು ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಪ್ರೌಢ ಶಾಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ಬಾಲಕರ ವಿಭಾಗದದಲ್ಲಿ ಪಾಪೆಮಜಲು ತಂಡದ ಆಟಗಾರ ಮಂಜುನಾಥ ಬೆಸ್ಟ್ ಅಟ್ಯಾಕರ್ ಮತ್ತು ಲೀಲಾಧರ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ತಂಡದ ದೀಕ್ಷಾ ಬಿ ಬೆಸ್ಟ್ ಅಟ್ಯಾಕರ್ ಮತ್ತು ಜಸ್ಮಿತ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತ ಬಾಲಕರ ಹಾಗೂ ಬಾಲಕಿಯರ ತಂಡವನ್ನು ಶಾಲಾ ಶಿಕ್ಷಕ ವೃಂದ ಮತ್ತು ಶಾಲಾಭಿವೃದ್ಧಿ ಸಮಿತಿಯವರು ಅಭಿನಂದಿಸಿದ್ದಾರೆ. ಎರಡೂ ವಿಭಾಗದಲ್ಲಿ ನಮ್ಮ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿರುವುದ ನಮಗೆ ಹೆಮ್ಮೆ ತಂದಿದೆ ಎಂದು ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here