ಆ.26: ಮುಡಿಪುನಡ್ಕ ಭಜನಾ ಮಂದಿರದ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ-36 ನೇ ವರ್ಷದ ಮೊಸರು ಕುಡಿಕೆ ಉತ್ಸವ

0

ನಿಡ್ಪಳ್ಳಿ: ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪುನಡ್ಕ ಇದರ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 36ನೇ ವರ್ಷದ ಮೊಸರು ಕುಡಿಕೆ ಉತ್ಸವ ಆ.26ರಂದು ನಡೆಯಲಿದೆ.

ಪಟ್ಟೆ ಪ್ರತಿಭಾ ಪ್ರೌಢಶಾಲಾ ಸಂಚಾಲಕ ಪಿ.ನಾರಾಯಣ ಭಟ್ ಬೀರ್ನೋಡಿ ಬೆಳಿಗ್ಗೆ ಗಂಟೆ 9.30 ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿರುವರು.ನಂತರ ಕಬಡ್ಡಿ, ಹಗ್ಗ ಜಗ್ಗಾಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಶ್ರೀಕೃಷ್ಣ ಭಕ್ತ ಸಮೂಹ ಮುಡಿಪುನಡ್ಕ ಇವರ ಪ್ರಾಯೋಜಕತ್ವದಲ್ಲಿ ಮಧ್ಯಾಹ್ನ  ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.30ರಿಂದ ಬಹುಮಾನ ವಿತರಣೆ ರಾತ್ರಿ ಗಂಟೆ 7.30ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here